ಕಾರವಾರ: ಕಾರವಾರ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಕಚೇರಿಯಲ್ಲಿ ಜೂ.21 ರಂದು ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3.30 ರಿಂದ ಸಂಜೆ 5.30 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೆನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ನೀಡುವಂತೆ ಕಾರವಾರ ಕಾರ್ಯಪಾಲನಾ ಮತ್ತು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.