ದಾಂಡೇಲಿ : ನಗರದ ಹಳೆ ದಾಂಡೇಲಿಯ ನಿವಾಸಿ ಸಂತೋಷ ಹಲ್ಕಟ್ಟಿ ಅವರು ಅಲ್ಪಕಾಲದ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು.
ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಸಂತೋಷ ಹಲ್ಕಟ್ಟಿ ಅವರು ಅಪಾರ ಸ್ನೇಹಿತ ಬಳಗವನ್ನು ಹೊಂದಿದ್ದರು. ಮೃತರು ತಾಯಿ, ಓರ್ವ ಸಹೋದರ, ಮೂವರು ಸಹೋದರಿಯರು, ಪತ್ನಿ ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.