Slide
Slide
Slide
previous arrow
next arrow

ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ

300x250 AD

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಜು.10 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದು, ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಶಾಸಕರಾದ ಎಸ್. ವಿ.ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಡಿ.ಉಳ್ವೇಕರ ಹಾಗೂ ನಗರಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top