ಬೆಂಗಳೂರು: ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮಳೆ ಇನ್ನೂ ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇಂದಿನಿಂದ ಅಕ್ಟೋಬರ್ 13 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಭಾಗದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಹಾಸನ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ.