ಕಾರವಾರ: ಹೆಸ್ಕಾಂ ಕಾರವಾರ ಕಚೇರಿಯ ಕಾರ್ಯ ಮತ್ತು ಪಾಲನಾ ಉಪ ವಿಭಾಗದಲ್ಲಿ ಅ.16 ರಂದು ಬೆಳಗ್ಗೆ 11 ಗಂಟೆಯಿಂದ ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿದ್ಯುತ್ ಅದಾಲತ್ ಹಾಗೂ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ.
ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ನೀಡಬಹುದಾಗಿರುತ್ತದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.