ಹೊನ್ನಾವರ: ರಾಷ್ಟ್ರೀಯ ಹೆದ್ದಾರಿ 66 ರ ತಾಲೂಕಿನ ಹಳದಿಪುರ ಕುದಬೈಲ್ ಕ್ರಾಸ್ ಸಮೀಪ ಬೈಕ್ ಸವಾರನಿಗೆ ಸಾರಿಗೆ ಇಲಾಖೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಮೃತ ಬೈಕ್ ಸವಾರ ಹಳದಿಪುರಸ ಸಂಗೊಳ್ಳಿ ನಿವಾಸಿ (77)ವರ್ಷದ ಗಣಪತಿ ಅನಂತ ನಾಯ್ಕ ಎಂದು ಗುರುತಿಸಲಾಗಿದೆ. ರವಿವಾರ ಸಂಬಂಧಿಕರ ಮನೆಯ ಕಾರ್ಯಕ್ರಮ ಮುಗಿಸಿ ಮನೆಗೆ ಮರಳುವ ಸಂದರ್ಭದಲ್ಲಿ ಕುಮಟಾ ಕಡೆಯಿಂದ ಹೊನ್ನಾವರದ ಕಡೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಬೈಕ್ ಗೆ ಗುದ್ದಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೊನ್ನಾವರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.