• first
    second
    third
    previous arrow
    next arrow
  • ಸಿದ್ದು, ಕುಮಾರಸ್ವಾಮಿ ರಾಜಕೀಯದಲ್ಲಿ ಹತಾಶರಾಗಿ ಮಾತನಾಡುತ್ತಿದ್ದಾರೆ; ಸಚಿವ ಹೆಬ್ಬಾರ್

    300x250 AD

    ಶಿರಸಿ: ರಾಜಕೀಯವಾಗಿ ಹತಾಶರಾಗಿರುವ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಾವು ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವೂ ಇಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.


    ನಗರದಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ಅವರಿಬ್ಬರಿಗೆ ತಾವು ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ. ಕೇವಲ ಆರ್‍ಎಸ್‍ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಎಂದು ಲೇವಡಿ ಮಾಡಿದರು.

    300x250 AD


    ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಪರಸ್ಪರ ಟೀಕಿಸಿಕೊಳ್ಳುತ್ತಾರೆ. ಒಮ್ಮೆಲೆ ಸಂಘ ಪರಿವಾರದ ಮೇಲೆ ಹರಿಹಾಯುತ್ತಾರೆ. ಇದು ಅವರಿಬ್ಬರೂ ಗೊಂದಲ್ಲಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದರು. ವಿಜಯದಶಮಿ ಮುಗಿಯಲಿ ಎಂದು ಕಾಯುತ್ತಿದ್ದೆವು. ಇಂದಿನಿಂದ ಎಲ್ಲ ಸಚಿವರೂ ಹಾನಗಲ್ ಕ್ಷೇತ್ರದಲ್ಲಿ ಬೀಡು ಬಿಡಲಿದ್ದು ಅ.28ರವರೆಗೆ ನಿರಂತರ ಪ್ರಚಾರ ನಡೆಸಲಿದ್ದೇವೆ ಎಂದರು.

    Share This
    300x250 AD
    300x250 AD
    300x250 AD
    Back to top