ಶಿರಸಿ: ಕಾನಸೂರಿನ ಶ್ರೀ ಕಾಳಿಕಾ ಭವಾನಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕವಯಿತ್ರಿ ಯಶಸ್ವಿನಿ ಅವರಿಗೆ ‘ಗುರುಕುಲ ಕಲಾ ಕೌಸ್ತುಭ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಗುರುಕುಲ ಪ್ರಥಮ ವರ್ಷದ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಸೃಜನಶೀಲತೆ ಮತ್ತು ಕಲೆ ಕ್ಷೇತ್ರದಲ್ಲಿ ಇವರ ಸಾಧನೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
ಕಾರ್ಯಕ್ರಮದಲ್ಲಿ ಗುರುಕುಲ ಪ್ರತಿಷ್ಠಾನದ ಗೌರವಾಧ್ಯಕ್ಷ ವಿದ್ಯಾ ವಾಚಸ್ಪತಿ ಡಾ. ಕವಿತಾ ಕೃಷ್ಣ, ಪ್ರಮುಖರಾದ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ, ಡಾ. ಶಿವರಾಜ ಗೌಡ ಇದ್ದರು.