ಯಲ್ಲಾಪುರ: ತಾಲೂಕಿನಲ್ಲಿ ಸೋಮವಾರ 7 ಕೊರೊನಾ ಕೇಸ್ ಪತ್ತೆಯಾಗಿದ್ದು, ಸಕ್ರಿಯ 12 ಕೇಸ್ ಇದೆ ಎಂದು ತಾಲೂಕಾಡಳಿತ ಮಾಹಿತಿ ನೀಡಿದೆ.
ಇಂದು ಇಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟೂ 4133 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 4083 ಮಂದಿ ಗುಣಮುಖರಾಗಿದ್ದಾರೆ. ಐವರು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಅ.19ಕ್ಕೆ ಎಲ್ಲಿ ವ್ಯಾಕ್ಸಿನ್: ತಾಲೂಕಿನಲ್ಲಿ ಅ.19ಕ್ಕೆ 280 ಡೋಸ್ ವ್ಯಾಕ್ಸಿನ್ ಲಭ್ಯವಿದ್ದು, ತಾಲೂಕಾಸ್ಪತ್ರೆಯಲ್ಲಿ 80 ಡೋಸ್, ಚವತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 100 ಡೋಸ್ ವ್ಯಾಕ್ಸಿನ್ ಲಭ್ಯವಿದೆ ಎಂದು ತಾಲೂಕಾಡಳಿತ ಮಾಹಿತಿ ನೀಡಿದೆ.