ಯಲ್ಲಾಪುರ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪಟ್ಟಣದ ಜೋಡುಕೆರೆ ಬಳಿ ಪೊಲೀಸರು ವಶಪಡಿಸಿಕೊಂಡಿದ್ದು, ಜಾನುವಾರುಗಳನ್ನು ರಕ್ಷಿಸಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಮಹಾರಾಷ್ಟ್ರದ ಅಹಮ್ಮದ್ ನಗರದ ಉಜೇಫ್ ರಾಜು ಮನ್ಸೂರಿ, ವಾಸಿಂ ಮಹಮ್ಮದ್ ಹುಸೇನ್ ಶೇಖ್ ಹಾಗೂ ರಜಾಕ್ ಇದ್ದು ಶೇಖ್ ಬಂಧಿತರು. ಇವರು 10 ಎಮ್ಮೆಗಳನ್ನು ಲಾರಿಯೊಂದರಲ್ಲಿ ಒತ್ತೊತ್ತಾಗಿ ತುಂಬಿಕೊಂಡು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದರು. ಪಟ್ಟಣದ ಜೋಡುಕೆರೆ ಬಳಿ ಪೊಲೀಸರು ತಪಾಸಣೆ ನಡೆಸಿದಾಗ ಸಿಕ್ಕಿಬಿದ್ದಿದ್ದು, ಲಾರಿ ಹಾಗೂ ಜಾನುವಾರುಗಳನ್ನು ವಶಪಡಿಸಿಕೊಂಡ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.