ಕುಮಟಾ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಾಲ್ಮೀಕಿ ಜಯಂತಿಯನ್ನು ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಶಾಸಕ ದಿನಕರ ಕೆ. ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಪುರಸಭಾ ಅಧ್ಯಕ್ಷೆ ಮೋಹಿನಿ ಗೌಡ, ಜಿಲ್ಲಾ ವಿಶೇಷ ಆಹ್ವಾನಿತ ಎಂ.ಜಿ.ಭಟ್ಟ, ಹಿರಿಯರಾದ ವಿನೋದ ಪ್ರಭು, ಹಿಂದುಳಿದ ಮೋರ್ಚಾ ಅಧ್ಯಕ್ಷ ವಿಶ್ವನಾಥ ನಾಯ್ಕ, ಎಸ್ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮುಕ್ರಿ, ಯುವ ಮೋರ್ಚಾ ಅಧ್ಯಕ್ಷ ಜಗದೀಶ ಭಟ್ಟ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಾಯಕ ನಾಯ್ಕ, ಮಂಡಲದ ಕಾರ್ಯದರ್ಶಿ ತಿಮ್ಮಪ್ಪ ಮುಕ್ರಿ, ಜಿಲ್ಲಾ ಯುವ ಮೋರ್ಚಾ ಸದಸ್ಯ ಆದಿತ್ಯ ಶೇಟ್. ಪವನ್ ಶೆಟ್ಟಿ, ಎಕ್ಸ್ ಸರ್ವೀಸ್ಮೆನ್ ಆರ್.ಎನ್.ಪಟಗಾರ, ಪುರಸಭಾ ಸದಸ್ಯೆ ಶೈಲಾ ಗೌಡ, ಎಂಎಂ ಹೆಗಡೆ, ರಾಮ ನಾಯ್ಕ, ರಾಮ ಮಡಿವಾಳ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ವಿನಾಯಕ ನಾಯ್ಕ ಸ್ವಾಗತಿಸಿ, ವಂದಿಸಿದರು. ವಾಲ್ಮೀಕಿ ಮಹರ್ಷಿಯವರ ಕುರಿತು ಹೇಮಂತಕುಮಾರ ಗಾಂವಕರ ಮಾತನಾಡಿದರು.