ಕಾರವಾರ: ಫ್ಲೈ ಓವರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರೊಂದು ಸುಟ್ಟು ಕರಕಲಾದ ಘಟನೆ ನಗರದ ಆರ್.ಟಿ.ಓ ಕಚೇರಿ ಮುಂಭಾಗದಲ್ಲಿ ನಡೆದಿದೆ.
ಬುಧವಾರ ರಾತ್ರಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕನಿಗೆ ಚಿಕ್ಕಪುಟ್ಟ ಗಾಯಗಳಾಗಿದೆ. ಗೋವಾದಿಂದ ಮಂಗಳೂರಿಗೆ ತೆರಳುತ್ತಿದ್ದ ಸ್ವೀಪ್ ಕಾರು ನಗರದ ಆರ್ಟಿಓ ಕಚೇರಿ ಸಮೀಪಿಸುತ್ತಿದ್ದಂತೆ ನಿಮಾರ್ಣಹಂತದಲ್ಲಿರುವ ಫ್ಲೈ ಓವರ್ ಕಂಬಕ್ಕೆ ಗುದ್ದಿದೆ. ಈ ವೇಳೆ ಏಕಾಏಕಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಸಂಪೂರ್ಣ ಕರಕಲಾಗಿದೆ. ಮಂಗಳೂರಿನ ಮಹಮ್ಮದ್ ಅಶ್ರಫ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ ಎಂಬುದು ತಿಳಿದು ಬಂದಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ