• first
    second
    third
    previous arrow
    next arrow
  • ಹಳ್ಳಿಯಿಂದ ರಾಜಧಾನಿಗೆ ಕೆಎಂಎಫ್ ಉತ್ಪಾದನೆ ಮಾರುಕಟ್ಟೆಗೆ ಯೋಜನೆ

    300x250 AD

    ಬೆಂಗಳೂರು: ಕರ್ನಾಟಕದಲ್ಲಿ ಹಾಲು ಉತ್ಪಾದನೆ ಹೆಚ್ಚಾಗಿದ್ದು, ಹಾಲು, ಹಾಲಿನ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೆಎಂಎಫ್ ಹಳ್ಳಿಯಿಂದ ರಾಜಧಾನಿ ನವದೆಹಲಿ ವರೆಗೆ ತಲುಪಲು ವಿಶೇಷ ಯೋಜನೆ ರೂಪಿಸಿದೆ.

    ಸಮಗ್ರ ವ್ಯಾಪಾರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದೇಶದಲ್ಲಿ ಪ್ರತಿಯೊಂದು ಹಳ್ಳಿ, ತಾಲೂಕು, ಜಿಲ್ಲೆ, ರಾಜಧಾನಿಗಳಿಗೆ ಕೆಎಂಎಫ್ ಉತ್ಪನ್ನಗಳನ್ನು ತಲುಪಿಸುವ ಉದ್ದೇಶ ಹೊಂದಿರುವುದಾಗಿ ಮೂಲಗಳು ಹೇಳಿವೆ.

    300x250 AD

    ಕೊರೋನಾ ಬಳಿಕ ಹಲವಾರು ಜನರು ಉದ್ಯೋಗ ಕಳೆದುಕೊಂಡು ಹೈನುಗಾರಿಕೆ ಮೂಲಕ ಸ್ವಯಂ ಉದ್ಯೋಗ ಮಾಡುತ್ತಿದ್ದಾರೆ. ಹೀಗಾಗಿ ಹಾಲು, ಹಾಲಿನ ಉತ್ಪನ್ನಗಳ ಹೆಚ್ಚುವರಿ ಉತ್ಪಾದನೆಯಾಗುತ್ತಿದ್ದು, ಅದಕ್ಕೆ ಸೂಕ್ತ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

    Share This
    300x250 AD
    300x250 AD
    300x250 AD
    Back to top