ಶಿರಸಿ: ಚುಟುಕು ಬ್ರಹ್ಮ ದಿನಕರ ದೇಸಾಯಿ ಸ್ಥಾಪಿತ, ಅಂಕೋಲಾದ ಕೆನರಾ ವೆಲ್ ಫಾರ್ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿರುವ ತಾಲೂಕಿನ ಜನತಾ ವಿದ್ಯಾಲಯ ಕುಳವೆ – ಬರೂರು ಪ್ರೌಢಶಾಲೆಯು ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಅ.23 ರಂದು ಶಾಲೆಯ ಆವರಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಶಾಲೆಯ ಮಾಜಿ ವಿದ್ಯಾರ್ಥಿಯೂ ಆಗಿರುವ, ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುವರ್ಣ ಮಹೋತ್ಸವದ ಸುವರ್ಣ ಸಂಚಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಬಿಡುಗಡೆ ಮಾಡಲಿದ್ದಾರೆ. ಟ್ರಸ್ಟಿನ ಅಧ್ಯಕ್ಷ ಎಸ್.ಪಿ.ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಧ್ಯಾಹ್ನ 2.30 ರಿಂದ ನಿವೃತ್ತ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಸಮ್ಮಾನ ಕಾರ್ಯಕ್ರಮ ನಡೆಯಲಿದ್ದು, ಟ್ರಸ್ಟಿನ ಕಾರ್ಯದರ್ಶಿ ಕೃಷ್ಣಾನಂದ ಶೆಟ್ಟಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ವಿಷ್ಣು ನಾಯ್ಕ, ನಿವೃತ್ತ ಪ್ರಾಂಶುಪಾಲ ವಿ.ಉಮಾಕಾಂತ ಭಟ್, ಡೆವಲಪ್ಮೆಂಟ್ ಸೊಸೈಟಿ ಅಧ್ಯಕ್ಷ ಭಾಸ್ಕರ ಹೆಗಡೆ ಆಗಮಿಸಲಿದ್ದಾರೆ. ಕುಳವೆ ಗ್ರಾಪಂ ಅಧ್ಯಕ್ಷ ವಿನಯ ಭಟ್, ಸುವರ್ಣ ಮಹೋತ್ಸವ ಸಂಭ್ರಮ ಸಮಿತಿ ಅಧ್ಯಕ್ಷ ಎಮ್.ಎಸ್.ಭಟ್ ಬೆಳಖಂಡ, ಸುವರ್ಣ ಮಹೋತ್ಸವ ಸಮಿತಿ ಉಪಾಧ್ಯಕ್ಷೆ ಭಾಗೀರಥಿ ಜೋಶಿ, ಶಾಲಾ ಅಭಿವೃದ್ಧಿ ಮಂಡಳಿಯ ಖಾಯಂ ಆಮಂತ್ರಿತ ಸದಸ್ಯ ಪರಮೇಶ್ವರ ಹೆಗಡೆ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಣ್ಣಪ್ಪ ನಾಯ್ಕ ಉಪಸ್ಥಿತಿ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.