• Slide
  Slide
  Slide
  previous arrow
  next arrow
 • ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿ

  300x250 AD

  ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿರೇಂದ್ರ ಎನ್. ಬಾಡಕರ ತಿಳಿಸಿದ್ದಾರೆ.

  300x250 AD


  ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಎ,3ಬಿ, ಪ. ಜಾ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ಆಸಕ್ತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ. ಪ್ರವರ್ಗ-1, ಎಸ್.ಸಿ. ಎಸ್.ಟಿ.2.50 ಲಕ್ಷ ರೂ, ಹಾಗೂ ಪ್ರವರ್ಗ-2ಎ,2ಬಿ,3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1ಲಕ್ಷ ರೂ ಒಳಗೆ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಹೊಂದಿರಬೇಕು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-226589, ತಾಲೂಕಾ ಅಥವಾ ಸಂಬಂಧಿಸಿದ ನಿಲಯ ಮೇಲ್ವಿಚಾರಕರನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ವಿಸ್ತರಣಾಧಿಕಾರಿ ತಿಳಿಸಿದ್ದಾರೆ.

  Share This
  300x250 AD
  300x250 AD
  300x250 AD
  Leaderboard Ad
  Back to top