• Slide
    Slide
    Slide
    previous arrow
    next arrow
  • ಅ.25 ರವರಗೆ ಭಾರೀ ಗಾಳಿ- ಮಳೆ ಸಾಧ್ಯತೆ

    300x250 AD

    ಬೆಂಳೂರು: ಅ. 25 ರ ವರೆಗೂ ಕೇರಳದಲ್ಲಿ ಮಳೆ ಮುಂದುವರಿಯುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೂ ಎಚ್ಚರಿಕೆಯಿಂದ ಇರುವಂತೆ ಹೇಳಿದ್ದಾರೆ.

    ಕೇರಳದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹಾಗೆಯೇ ಮೀನುಗಾರಿಕೆಗಾಗಿ ಸಹ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಸಲಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಎಚ್ಚರಿಕೆ ವಹಿಸುವಂತೆ ಸಚಿವ ಆರ್.ಅಶೋಕ್ ಸೂಚಿಸಿದ್ದಾರೆ.

    300x250 AD

    ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಮುನ್ನೆಚ್ಚರಿಕೆ ವಹಿಸುವಂತೆ ಅಶೋಕ್ ತಿಳಿಸಿದ್ದಾರೆ. ಮಳೆಯಿಂದಾಗಿ ಸಂಭವಿಸಬಹುದಾದ ಯಾವುದೇ ರೀತಿಯ ಅಪಾಯವನ್ನು ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಅವರು ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top