ಶಿರಸಿ: ತಾಲೂಕಿನ ಹುಲೇಕಲ್ ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಸಭಾಭವನದಲ್ಲಿ ಅ. 28 ರಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ಗಾನವೈವಿಧ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಯಕ್ಷಗಾನ ತಾಳಮದ್ದಲೆಯ ಪ್ರಸಿದ್ಧ ಅರ್ಥಧಾರಿ ಹರೀಶ ಬಳಂತಿಮೊಗರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಯಕ್ಷಗಾನದ ಖ್ಯಾತ ಮಹಿಳಾ ಭಾಗವತಿಕೆಯ ಶ್ರೀಮತಿ ಕಾವ್ಯಶ್ರೀ ಆಜೇರು ಗಾನ ವೈವಿಧ್ಯ ನಡೆಸಿಕೊಡಲಿದ್ದಾರೆ. ಇದೇ ಸಂದರ್ಭದಲ್ಲಿ ಮೃದಂಗದಲ್ಲಿ ಶ್ರೀಧರ ವಿಟ್ಲ ಸಹಕರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಶ್ರೀದೇವಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಎಂ.ಎನ್. ಹೆಗಡೆ ವಹಿಸಲಿದ್ದು, ಅತಿಥಿಗಳಾಗಿ ಕಾರ್ಯದರ್ಶಿ ಶಾಂತಾರಾಮ ಹೆಗಡೆ ಪಾಲ್ಗೊಳ್ಳಲಿದ್ದಾರೆ.