ಶಿರಸಿ: ತಾಲೂಕಿನಲ್ಲಿ ಅ.26 ಮಂಗಳವಾರ ಹಲವೆಡೆ ಕೊರೊನಾ ವ್ಯಾಕ್ಸಿನ್ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಬನವಾಸಿಯಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ಬಿಸಲಕೊಪ್ಪದಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ದಾಸನಕೊಪ್ಪದಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹುಲೇಕಲ್’ನಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕಕ್ಕಳ್ಳಿಯಲ್ಲಿ, ರೇವಣಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲ್ಕಣಿಯಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಗಾವಿಯಲ್ಲಿ ವ್ಯಾಕ್ಸಿನ್ ಲಭ್ಯವಿದೆ. ಮತ್ತು ಕೋವ್ಯಾಕ್ಸಿನ್ ಲಸಿಕೆಯು ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ತಾಲೂಕಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಭ್ಯವಿದೆ ಎಂದು ಮಾಹಿತಿ ನೀಡಿದೆ.