ಕಾರವಾರ: ಪ್ರಸ್ತುತ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಕ್ಕಾಗಿ ನಾವು ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಕನ್ನಡ ನಾಡು-ನುಡಿ ಸಂಸ್ಕೃತಿ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಅನ್ಯ ಭಾಷೆಯ ಪದಗಳನ್ನು ಬಳಸದೇ ಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕಾರವಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಜಿ. ನಾಯ್ಕ ತಿಳಿಸಿದ್ದಾರೆ.
ಸ್ಪರ್ಧೆಯಲ್ಲಿ ಎಲ್ಲಾ ವರ್ಗದ ಸಾರ್ವಜನಿಕರು ಭಾಗವಹಿಸಲು ಅವಕಾಶವಿದ್ದು, ಅ. 26ರಾತ್ರಿ 10 ಗಂಟೆಯ ಒಳಗಾಗಿ ಸಾರ್ವಜನಿಕರು ಮಾತನಾಡಿದ ವಿಡಿಯೋ ಲಿಂಕ್ ಅನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಿಂದ ಅನುಮೋದನೆಗೊಂಡು ಲಿಂಕ್‍ನಲ್ಲಿ ಅಪ್‍ಲೋಡ್ ಮಾಡಬಹುದಾಗಿದೆ. ಜಿಲ್ಲಾ ಹಂತದಲ್ಲಿ ಪ್ರಥಮ 5 ಸಾವಿರ, ದ್ವೀತಿಯ 3 ಹಾಗೂ ತೃತೀಯ 2 ಸಾವಿರ ಬಹುಮಾನ ಮತ್ತು ಪ್ರಶಸ್ತಿ ಪತ್ರ್ರವನ್ನು ನೀಡಲಾಗುವುದು. ಜಿಲ್ಲೆಯಿಂದ ಆಯ್ಕೆಯಾದವರು ಬೆಂಗಳೂರಿನಲ್ಲಿ ಅ. 30 ಅಂತಿಮ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಜಿಲ್ಲೆಯ ಆಸಕ್ತ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಎನ್. ಜಿ. ನಾಯ್ಕ ತಿಳಿಸಿದ್ದಾರೆ.