Slide
Slide
Slide
previous arrow
next arrow

5 ವರ್ಷದಲ್ಲಿ ಭಾರತದ ರಕ್ಷಣಾ ರಫ್ತು ಶೇ.334 ರಷ್ಟು ವೃದ್ಧಿ; ಸಚಿವ ರಾಜನಾಥ್ ಸಿಂಗ್

300x250 AD

ನವದೆಹಲಿ: ಕಳೆದ 5 ವರ್ಷಗಳಲ್ಲಿ ಭಾರತದ ರಕ್ಷಣಾ ರಫ್ತುಗಳು 334 ಪ್ರತಿಶತದಷ್ಟು ವೃದ್ಧಿಯಾಗಿದೆ. ಇತರ ದೇಶಗಳ ರಕ್ಷಣಾ ಅವಶ್ಯಕತೆಗಳನ್ನು ಪೂರೈಸಲು ಭಾರತ ಸಿದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಭಾರತದ ರಕ್ಷಣಾ ರಫ್ತು ಶೇಕಡಾ 334 ರಷ್ಟು ಬೆಳವಣಿಗೆಯಾಗಿದೆ ಮತ್ತು ಈಗ ದೇಶವು 75 ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡುತ್ತಿದೆ ಎಂದಿದ್ದಾರೆ.

ನವದೆಹಲಿಯಲ್ಲಿ ನಡೆದ ಆಇಈಇಘಿPಔ-22 ರ ರಾಯಭಾರಿಗಳ ದುಂಡು ಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಭಾರತದ ರಫ್ತು ಕಾರ್ಯಕ್ಷಮತೆಯು ರಕ್ಷಣಾ ಉತ್ಪನ್ನಗಳ ಗುಣಮಟ್ಟ ಮತ್ತು ಸ್ಪರ್ಧಾತ್ಮಕತೆಯ ಬಲವಾದ ಸೂಚಕವಾಗಿದೆ. ಇತರ ರಾಷ್ಟ್ರಗಳ ರಕ್ಷಣಾ ಅವಶ್ಯಕತೆಗಳನ್ನು ಪೂರೈಸಲು ಭಾರತ ಸಿದ್ಧವಾಗಿದೆ ಎಂದು ಅವರು ಹೇಳಿದರು.

300x250 AD

ರಕ್ಷಣಾ ಆಧುನೀಕರಣ ಮತ್ತು ಸಾಮಥ್ರ್ಯಗಳ ಬೆಳವಣಿಗೆಯನ್ನು ಬೆಂಬಲಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

2021-22ರ ವಾರ್ಷಿಕ ಬಜೆಟ್‍ನಲ್ಲಿ ಭಾರತವು ರಕ್ಷಣಾ ಬಂಡವಾಳದ ವೆಚ್ಚವನ್ನು ಹಿಂದಿನ ವರ್ಷಕ್ಕಿಂತ 18.75 ಪ್ರತಿಶತದಷ್ಟು ಹೆಚ್ಚಿಸಿದೆ ಎಂದು ಸಚಿವರು ಹೇಳಿದರು. ಇದು ಕಳೆದ 15 ವರ್ಷಗಳಲ್ಲೇ ಅತ್ಯಧಿಕ ಏರಿಕೆಯಾಗಿದೆ. ಸಶಸ್ತ್ರ ಪಡೆಗಳನ್ನು ಆಧುನೀಕರಿಸಲು ಮತ್ತು ಉತ್ತಮ ಗುಣಮಟ್ಟದ ಮತ್ತು ವೆಚ್ಚ-ಪರಿಣಾಮಕಾರಿ ಶಸ್ತ್ರಾಸ್ತ್ರ ವ್ಯವಸ್ಥೆಗಳು ಮತ್ತು ವೇದಿಕೆಗಳನ್ನು ತಯಾರಿಸಲು ಸರ್ಕಾರವು ಹಲವಾರು ಉಪಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಿಂಗ್ ಹೇಳಿದರು.
ನ್ಯೂಸ್ 13

Share This
300x250 AD
300x250 AD
300x250 AD
Back to top