• first
    second
    third
    previous arrow
    next arrow
  • ಲಂಚ ಕೇಳಿದ ಅಧಿಕಾರಿಗೆ ಜನರಿಂದ ಭಿಕ್ಷೆ ಬೇಡಿ ಹಣ ನೀಡಲು ಮುಂದಾದ ಯುವಕ;ಯಲ್ಲಾಪುರಲ್ಲೊಂದು ಅಪರೂಪದ ಘಟನೆ !

    300x250 AD

    ಯಲ್ಲಾಪುರ: ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಬಯಸಿದ ಅಧಿಕಾರಿಯ ಮನಪರಿವರ್ತನೆ ಮಾಡುವುದಕ್ಕಾಗಿ ವ್ಯಕ್ತಿಯೊಬ್ಬರು ಜನರಿಂದ ಬಿಕ್ಷೆ ಬೇಡಿ ಹಣ ನೀಡಲು ಮುಂದಾದ ಘಟನೆ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದಿದೆ.

    ತಟಗಾರ ಗ್ರಾಮದ ಸರ್ವೆ ನಂ 12ರಲ್ಲಿನ ಕ್ಷೇತ್ರವನ್ನು ಉಪ ನೋಂದಣಾಧಿಕಾರಿ ಕಚೇರಿ ಮೂಲಕ ಗಜಾನನ ಭಟ್ಟ ಹಾಗೂ ನಾರಾಯಣ ಭಟ್ಟ ಎಂಬ ಸಹೋದರರಿಬ್ಬರು ವಿಭಾಗ ಮಾಡಿಕೊಂಡಿದ್ದರು. ಇದನ್ನು ಪಹಣಿ ಪತ್ರಿಕೆಯಲ್ಲಿ ದಾಖಲು ಮಾಡಲು ಕಂದಾಯ ಇಲಾಖೆ ಅಧಿಕಾರಿಯೊಬ್ಬರು 2 ಸಾವಿರ ರೂ ಬೇಡಿಕೆ ಇಟ್ಟಿದ್ದರು. ಹೀಗಾಗಿ ಗಜಾನನ ಭಟ್ಟ ಅವರ ಪುತ್ರ ಅಚ್ಯುತಕುಮಾರ ಎಂಬಾತರು ಮಂಗಳವಾರ ಸಾರ್ವಜನಿಕರಿಂದ ಬಿಕ್ಷೆ ಬೇಡಿ ಅಧಿಕಾರಿಗೆ ಅವರು ಬಯಸಿದ ಹಣ ನೀಡಲು ಮುಂದಾದರು.

    ಭ್ರಷ್ಟಾಚಾರದ ಕುರಿತು ಹೋರಾಟ ಮಾಡುವುದಕ್ಕಿಂತ ಮೊದಲು ಅಧಿಕಾರಿಗಳ ಮನ ಪರಿವರ್ತನೆ ಮಾಡುವುದು ಮುಖ್ಯ ಎಂದು ಭಾವಿಸಿ ಜನರಿಂದ ಬಿಕ್ಷೆ ಬೇಡಿ ಅಧಿಕಾರಿಯ ಬೇಡಿಕೆ ಪೂರೈಸಲು ನಿರ್ಧರಿಸಿದೆ ಎಂದು ಅಚ್ಯುತಕುಮಾರ ಈ ವೇಳೆ ತಿಳಿಸಿದರು. ಅಚ್ಯುತಕುಮಾರ ಅವರು ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ ಟಿವಿ ಕಡ್ಡಾಯ ಮಾಡಬೇಕು ಎಂದು ಮೂರು ವರ್ಷದ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದರು. ಜಿಲ್ಲಾಡಳಿತ ಆ ವೇಳೆ ಸರ್ಕಾರಿ ಕಚೇರಿಗಳಲ್ಲಿ ಸಿಸಿ ಟಿವಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಎಲ್ಲಾ ಕಚೇರಿಗಳಲ್ಲಿ ಆ ಆದೇಶ ಇನ್ನೂ ಅನುಷ್ಠಾನ ಆಗಿಲ್ಲ. ಈ ಆದೇಶದ ಅನ್ವಯ ಯಲ್ಲಾಪುರದ ತಹಶೀಲ್ದಾರ್ ಕಚೇರಿಯ ಎಲ್ಲಡೆ ಸಿ.ಸಿ ಟಿವಿ ಅಳವಡಿಸುವಂತೆ ಅವರು ತಹಶೀಲ್ದಾರ್ ಶ್ರೀಕೃಷ್ಣ ಕಾಮೇಕರ್ ಅವರಿಗೆ ಮನವಿ ಮಾಡಿದರು. ತಹಶೀಲ್ದಾರ್ ಶ್ರೀಕೃಷ್ಣ ಕಾಮೇಕರ್ ಅವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.

    300x250 AD

    ಭ್ರಷ್ಟಾಚಾರ ತಡೆಗೆ ಸರ್ಕಾರಿ ಕಚೇರಿಯ ಎಲ್ಲಡೆ ಸಿ.ಸಿ ಟಿವಿ ಕಡ್ಡಾಯ ಆಗಬೇಕು. ಈ ಕುರಿತು ಜಿಲ್ಲಾಡಳಿತ ಆದೇಶ ಹೊರಡಿಸಿದ್ದರೂ ಪಾಲನೆಯಾಗಿಲ್ಲ. ಪ್ರಸ್ತುತ ಜನರಿಂದ ಸ್ವೀಕೃತವಾದ 136 ರೂ ಅನ್ನು ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪೃಕೃತಿ ವಿಕೋಪ ನಿಧಿಗೆ ನೀಡಲಾಗುವುದು.
    – ಅಚ್ಯುತಕುಮಾರ

    Share This
    300x250 AD
    300x250 AD
    300x250 AD
    Back to top