ಶಿರಸಿ: ತಾಲೂಕಿನ ಬನವಾಸಿ ಮಧುಕೇಶ್ವರ ದೇವಾಲಯದಲ್ಲಿ ಅ.28ಕ್ಕೆ ಕನ್ನಡ ಗೀತ ಗಾಯನ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್. ಕೆ. ಕೃಷ್ಣಮೂರ್ತಿ ತುರ್ತು ಸಭೆ ನಡೆಸಿ ಹೇಳಿದರು.
ಇಲ್ಲಿನ ಮಿನಿ ವಿಧಾನಸೌಧ ಸಭಾಭವನದಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಕೆ. ಕೃಷ್ಣಮೂರ್ತಿ ಮಂಗಳವಾರ ತುರ್ತು ಸಭೆ ನಡೆಸಿ, ಮಾತನಾಡಿದ ಅವರು, ಸಚಿವ ಸುನೀಲ್ ಕುಮಾರ್ ಅವರ ಸೂಚನೆ ಮೇರೆಗೆ ರಾಜ್ಯಾದ್ಯಂತ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಏಕಕಾಲಕ್ಕೆ ನಡೆಯುವ ಕಾರ್ಯಕ್ರಮ ಇದಾಗಿದೆ. ಜಿಲ್ಲೆಯಲ್ಲಿ 34,000 ಜನರು ಇದರಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಬನವಾಸಿಯಲ್ಲಿ ನಡೆಯಲಿದ್ದು, ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ. ಉಳಿದಂತೆ ಸದಾಶಿವ ಘಡ, ಮಿರ್ಜಾನ್ ಕೋಟೆ, ಮಾಜಳ್ಳಿ ಬೀಚ್, ಜೈನ ಬಸದಿ, ದಾಂಡೇಲಿ, ಮಾರಿಕಾಂಬಾ ಕಾಲೇಜು ಶಿರಸಿ ಇಲ್ಲಿಯೂ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಭಾಷೆ ವೈಭವ ಹಾಗೂ ಶ್ರೇಷ್ಟತೆ ಹೆಚ್ಚಿಸಲು ರಾಜ್ಯ ಸರ್ಕಾರ ಈ ವರ್ಷ ವಿಭಿನ್ನವಾಗಿ ರಾಜ್ಯೋತ್ಸವ ಆಚರಿಸಲು ಮುಂದಾಗಿದೆ. ಪಕ್ಷ, ಜಾತಿ ಬೇಧವಿಲ್ಲದೆ ನಾವು ಕನ್ನಡ ರಾಜ್ಯೋತ್ಸವ ಆಚರಿಸೋಣ ಎಂದರು.
ಈ ವೇಳೆ ತಹಸೀಲ್ದಾರ ಎಂ.ಆರ್. ಕುಲ್ಕರ್ಣಿ, ಡಿಡಿಪಿಐ ದಿವಾಕರ ಶೆಟ್ಟಿ ಇತರರು ಇದ್ದರು.