ಮುಂಡಗೋಡ: ತಾಲೂಕಿನ ಪಂಚವಟಿ ಮಳಗಿಯ ಜವಾಹರ ನವೋದಯ ವಿದ್ಯಾಲಯವು 2022-23 ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸುವವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನ.30 ರೊಳಗಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ ಸೆಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲೆಯ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ನವೋದಯ ವಿದ್ಯಾಲಯದ ಪ್ರಾಚಾರ್ಯ ವಿ.ಬಿ.ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.