• first
    second
    third
    previous arrow
    next arrow
  • ಕಸ ವಿಲೇವಾರಿ ಘಟಕದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸ್ಪೀಕರ್ ಕಾಗೇರಿ ಚಾಲನೆ

    300x250 AD

    ಶಿರಸಿ: ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಶಿರಸಿ ನಗರಸಭೆಯ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗುದ್ದಲಿ ಪೂಜೆ ನೆರವೇರಿಸಿದರು.

    ನಗರದ ಕರಿಗುಂಡಿ ರಸ್ತೆಯಲ್ಲಿರುವ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದಲ್ಲಿ ಕಾರ್ಯಕ್ರಮ ಮಾತನಾಡಿದ ಅವರು, ಸ್ವಚ್ಛ ಭಾರತ ಯೋಜನೆಯಡಿ ಈ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನದಲ್ಲಿ ಮಾದರಿಕಸ ವಿಲೇವಾರಿ ಘಟಕವನ್ನಾಗಿಸುವ ಪ್ರಯತ್ನ ನಮ್ಮದಾಗಬೇಕು ಎಂದರು.

    300x250 AD

    ಈ ವೇಳೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಂದನ ಸಾಗರ, ನಗರಸಭೆ ಸದಸ್ಯರಾದ ಆನಂದ ಸಾಲೇರ,ನಾಗರಾಜ ನಾಯ್ಕ, ರಮಾಕಾಂತ ಭಟ್ಟ, ಬಿಜೆಪಿ ನಗರ ಘಟಕಾಧ್ಯಕ್ಷ ರಾಜೇಶ ಶೆಟ್ಟಿ ಸೇರಿದಂತೆ ಇನ್ನಿತರರು ಇದ್ದರು.

    Share This
    300x250 AD
    300x250 AD
    300x250 AD
    Back to top