ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 600 ಕ್ಕೂ ಅಧಿಕ ಹೆಚ್ಚುವರಿ ಸಾರಿಗೆ ಬಸ್’ಗಳನ್ನು ಅ. 30, 31, ಮತ್ತು. 1,3,5,7 ರಂದು ಕಾರ್ಯ ನಿರ್ವಹಿಸಲಿವೆ ಎಂದು ನಗರದಲ್ಲಿ ಸಾರಿಗೆ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಾರ್ಯಾಚರಣೆ ಗೊಳಿಸಲಾಗುತ್ತಿದೆ. ಹಬ್ಬ ಮುಗಿದ ನಂತರ ಬೆಂಗಳೂರು, ಮತ್ತು ಇತರ ನಗರಗಳಿಗೆ ತೆರಳುವ ಪ್ರಯಾಣಿಕರ ಬೇಡಿಕೆಗಳಿಗೆ ಅನುಗುಣವಾಗಿ ನ.5, 7ರಂದು ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳನ್ನು ಬಿಡಲಾಗುವುದು. ಸಾರ್ವಜನಿಕರು ಸಂಸ್ಥೆಯ ಅಧೀಕೃತ ವೆಬಸೈಟ್ ಮೂಲಕ ಮುಂಗಡವಾಗಿ ವೇಗದೂತ ಹಾಗೂ ಪ್ರತಿಷ್ಠಿತ ಸಾರಿಗೆಗಳಲ್ಲಿ ಟಿಕೆಟ್ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ. ಈ ಹೆಚ್ಚುವರಿ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.