ಬೆಂಗಳೂರು: ರಾಜ್ಯದಲ್ಲಿ ವರ್ಷಕ್ಕೆ ಎರಡು ಬಾರಿ ಶಿಕ್ಷಕರ ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಶಿಕ್ಷಕರ ನೇಮಕಾತಿ ಹಿನ್ನೆಲೆಯಲ್ಲಿ ನಡೆಸಲಾಗುತ್ತಿರುವ ಸಿಇಟಿ ಪರೀಕ್ಷೆಯಲ್ಲಿ ಅರ್ಜಿ ಕರೆದಷ್ಟು ಶಿಕ್ಷಕರು ಉತ್ತೀರ್ಣರಾಗುತ್ತಿಲ್ಲವಾಗಿದ್ದು, ಈ ಹಿನ್ನೆಲೆಯಲ್ಲಿ ವರ್ಷದಲ್ಲಿ ಎರಡು ಬಾರಿ ಸಿಇಟಿ ನಡೆಸಲು ತೀರ್ಮಾನ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದಾರೆ.
ಕಳೆದ ಬಾರಿ ನಡೆಸಲಾದ ಪರೀಕ್ಷೆಯಲ್ಲಿ 3 ಸಾವಿರ ಶಿಕ್ಷಕರಷ್ಟೇ ಉತ್ತೀರ್ಣರಾಗಿದ್ದಾರೆ. ಆದರೆ ಹೆಚ್ಚಿನ ಶಿಕ್ಷಕರ ಅಗತ್ಯ ಇತ್ತು. ಇದನ್ನು ಗಮನಿಸಿ ವರ್ಷದಲ್ಲಿ ಎರಡು ಬಾರಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.