• first
  second
  third
  previous arrow
  next arrow
 • ವಿಶ್ವದರ್ಶನದಲ್ಲಿ ಯಶಸ್ವಿಯಾಗಿ ನಡೆದ ಕನ್ನಡ ಗೀತ ಗಾಯನ

  300x250 AD

  ಯಲ್ಲಾಪುರ: ಇಲ್ಲಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಲಕ್ಷ- ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

  300x250 AD


  ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು ಏಕಕಾಲಕ್ಕೆ ಸರ್ಕಾರ ನಿಗದಿ ಪಡಿಸಿದ ಗಾಯನಗಳನ್ನು ಪ್ರಸ್ತುತ ಪಡಿಸಿದರು. ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಇದಾದ ನಂತರ ಮಕ್ಕಳು ಕನ್ನಡದಲ್ಲಿ ಮಾತನಾಡುವ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತರಾಜ್ ಇಲಾಖೆಯ ರಾಜ್ಯ ವಿಕೇಂದ್ರಿಕರಣ ಯೋಜನೆಯ ಉಪಾಧ್ಯಕ್ಷ ಪ್ರಮೋದ ಹೆಗಡೆ ಸಂದೇಶ ನುಡಿಗಳನ್ನು ನುಡಿದರು. ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ನರಸಿಂಹ ಕೋಣೆಮನೆ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವೀಣಾ ಭಾಗ್ವತ್ ಪ್ರತಿಜ್ಞಾ ವಿಧಿ ಬೋಧಿಸಿದರು. ಮುಕ್ತಾ ಶಂಕರ್ ಸ್ವಾಗತಿಸಿದರು. ಡಿ.ಕೆ ಗಾಂವ್ಕರ್ ನಿರ್ವಹಿಸಿದರು. ಗಣೇಶ ಭಟ್ಟ ವಂದಿಸಿದರು.

  Share This
  300x250 AD
  300x250 AD
  300x250 AD
  Back to top