• Slide
    Slide
    Slide
    previous arrow
    next arrow
  • ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಆರೋಗ್ಯ ಏರುಪೇರು; ಆಸ್ಪತ್ರೆಗೆ ದಾಖಲು

    300x250 AD

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ.

    ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದ್ದು, ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಮೇಲ್ನೋಟಕ್ಕೆ ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

    300x250 AD

    ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ನಾಲ್ಕು ಗಂಟೆಗಳ ಹಿಂದಷ್ಟೇ ಶಿವಣ್ಣ ಅಭಿಯನದ ಭಜರಂಗಿ-2 ಚಿತ್ರದ ಯಶಸ್ಸು ಕೋರಿ ಇಡೀ ಚಿತ್ರತಂಡಕ್ಕೆ ಪುನೀತ್ ರಾಜ್ ಕುಮಾರ್ ಶುಭ ಕೋರಿದರು. ನಂತರ ಅವರ ಆರೋಗ್ಯ ಸಮಸ್ಯೆ ಬಿಗಡಾಯಿಸಿದೆ.

    ವಿಕ್ರಂ ಆಸ್ಪತ್ರೆಗೆ ಅಭಿಮಾನಿಗಳು ಆಗಮಿಸುತ್ತಿದ್ದು, ಬಿಗಿ ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿಯ ಪೆÇಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top