Slide
Slide
Slide
previous arrow
next arrow

ಮರಳಿ ಬಾರದ ಲೋಕಕ್ಕೆ ನಟ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್

300x250 AD

ಬೆಂಗಳೂರು: ಕನ್ನಡ ಚಿತ್ರ ರಂಗದ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ (46) ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ, ಜಿಮ್ ಮಾಡುವಾಗ ಅಸ್ವಸ್ಥರಾಗಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ಮೊದಲಿಗೆ ರಮಣಶ್ರೀ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೈದ್ಯರ ನಿರಂತರ ಪ್ರಯತ್ನದ ನಡುವೆಯೂ ಪುನೀತ್ ಬಾರದ ಲೋಕಕ್ಕೆ ತೆರಳಿದ್ದಾರೆ.

ಪುನೀತ್ ರಾಜ್‍ಕುಮಾರ್ ಅವರು, 17 ಮಾರ್ಚ್ 1975ರಂದು ಜನಿಸಿದ್ದರು. ನಟ, ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರಾಗಿ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಕನ್ನಡ ಚಿತ್ರರಂಗದಲ್ಲಿ ತಂದೆ ದಿವಂಗತ ಡಾ.ರಾಜ್ ಕುಮಾರ್ ಜೊತೆಗೆ ನಟರಾಗಿ ತೊಡಗಿಸಿಕೊಂಡಿದ್ದ ಅವರು, ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಿದ್ದರು.

300x250 AD

ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು.

ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು. ಪುನೀತ್ ಮೊದಲ ಪ್ರಮುಖ ಪಾತ್ರದಲ್ಲಿ 2002′ ಅಪ್ಪು ಚಿತ್ರದಲ್ಲಿ ಅಭಿನಯಿಸಿದರು. ಅವರ ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ.

Share This
300x250 AD
300x250 AD
300x250 AD
Back to top