ಕಾರವಾರ: ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿತು. ರಾಜ್ಯ ಕಾರ್ಮಿಕ ಇಲಾಖೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಪೊಲೀಸ್ ಪರೇಡ್ ಮೈದಾನದಲ್ಲಿ ವಿವಿಧ ಇಲಾಖೆಯಿಂದ ಆಕರ್ಷಕವಾದ ಪಥಸಂಚಲನ ನಡೆಯಿತು.