Slide
Slide
Slide
previous arrow
next arrow

ಬಾಂಗ್ಲಾ ಮೂಲದ ಶಂಕಿತ ಉಗ್ರನ ಬಂಧನ

300x250 AD

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ ಸಂಘಟನೆಗೆ ಸೇರಿದ ಶಂಕಿತ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಉಗ್ರ ನೆಲೆಸಿರುವ ಬಗ್ಗೆ ಸಿಕ್ಕಿದ ಸುಳಿವಿನ ಆಧಾರದ ಮೇರೆಗೆ ಎನ್‍ಐಎ ಸಿಬ್ಬಂದಿಯ ತಂಡ ಮಂಗಳವಾರ ಸುಭಾಸ್‍ಗ್ರಾಮ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಪ್ರಜೆಯಾದ ಈ ಉಗ್ರನನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ

300x250 AD

ಆತನ ಬಳಿ ಇದ್ದ ನಕಲಿ ಮತದಾರ ಚೀಟಿ ಮತ್ತು ಆಧಾರ್ ಕಾರ್ಡ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ. ಅವನು ಹೇಗೆ ಮತ್ತು ಯಾವಾಗ ಭಾರತಕ್ಕೆ ಪ್ರವೇಶಿಸಿದ ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನ್ಯೂಸ್ 13

Share This
300x250 AD
300x250 AD
300x250 AD
Back to top