ಶಿರಸಿ: ಹಾನಗಲ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದನ್ನು ಸಂಭ್ರಮಿಸಿ ಬನವಾಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಇಲ್ಲಿನ ಕದಂಬ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿದ ಕಾರ್ಯಕರ್ತರು ಕಾಂಗ್ರೆಸ್ ಗೆಲುವಿಗೆ ಸಂತೋಷ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡ ಸಿ.ಎಪ್ ನಾಯ್ಕ್ ಮಾತನಾಡಿ, ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನ ಬೇಸರಗೊಂಡಿದ್ದು, ಭವಿಷ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಹಾನಗಲ್ ಚುನಾವಣೆ ಫಲಿತಾಂಶ ಇದಕ್ಕೆ ದಿಕ್ಸೂಚಿಯಾಗಿದೆ ಎಂದು ಹೇಳಿದರು.
ಪರಿಶಿಷ್ಠ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ತಾ.ಪಂ ಮಾಜಿ ಅಧ್ಯಕ್ಷೆ ಶ್ರೀಲತಾ ಕಾಳೇರಮನಿ, ಮುಖಂಡರಾದ ಜೈಶೀಲ್ ಗೌಡ, ಕಿರಣ ನಾಯ್ಕ, ಮಹಮದ್ ಖರೀಂ, ಅಲ್ತಾಫ್ ಶರೀಪ್, ಕಲ್ಲಪ್ಪ ಭಾಶಿ ಇತರರು ಇದ್ದರು