ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಶೇ.0.49 ರಷ್ಟು ಕೊರೊನಾ ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅದರಂತೆ ಕಳೆದ ಎರಡು ದಿನದ ಅವಧಿಯ ಗುರುವಾರದಂದು ಶೇ.0.45ಹಾಗೂ ಬುಧವಾರ ಶೇ. 0.48ರಷ್ಟು ಪಾಸಿಟಿವಿಟಿ ದಾಖಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದಿಂದ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗಿದ್ದ ಸಾವಿನ ಪ್ರಮಾಣವೂ ಗಣನೀಯವಾಗಿ ಕಡಿಮೆಯಾಗಿದೆ.