ಕಾರವಾರ: ಜಿಲ್ಲಾ ಪಂಚಾಯತ್ ಕಾರವಾರ ಸಭಾಂಗಣದಲ್ಲಿ ಸಂಸದ ಅನಂತಕುಮಾರ ಹೆಗಡೆಯವರು ನ.8 ರ ಬೆಳಿಗ್ಗೆ 11 ಗಂಟೆಗೆ ದಿಶಾ (ಕೇಂದ್ರ ಪುರಸ್ಕøತ ಯೋಜನೆ) ಸಭೆ ಹಾಗೂ ಮಧ್ಯಾಹ್ನ 2.30 ಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಬಂದರು ಇಲಾಖೆ ಅಧಿಕಾರಿಗಳ ಸಭೆ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.