ಶಿರಸಿ: ತಾಲೂಕಿನ ಶ್ರೀ ಶಾರದಾಂಬಾ ಶಿಕ್ಷಣ ಸಂಸ್ಥೆ ಭೈರುಂಬೆಗೆ ಬೆಂಗಳೂರಿನ ರಾಷ್ಟ್ರೋತ್ಥಾನ ಸಂಸ್ಥೆಯ ಸಾಧನಾ ವಿಭಾಗದ ರವಿಕುಮಾರ ಗುರೂಜಿ ಮತ್ತು ಶಾರದಾ ಮಾತಾಜಿ ಹಾಗೂ 80 ಕ್ಕೂ ಹೆಚ್ಚು ಜನ ವಿದ್ಯಾರ್ಥಿನಿಯರು ಇಲ್ಲಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರು ಶಿಕ್ಷಣ ಸಂಸ್ಥೆಯ ವ್ಯವಸ್ಥೆಯನ್ನು ನೋಡಿ ಖುಷಿಪಟ್ಟರು. ಪ್ರತಿ ವರ್ಷವು ಇಂತಹ ಸಂಸ್ಥೆಯಿಂದ ತಮ್ಮ ತಪಸ್ ಮತ್ತು ಸಾಧನಾ ವಿಭಾಗಕ್ಕೆ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಆಯ್ಕೆ ಆಗುತ್ತಿರುವುದಕ್ಕೆ ಸಂಸ್ಥೆಯನ್ನು ಅಭಿನಂದಿಸಿದರು. ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ವಿದ್ಯಾರ್ಥಿಗಳನ್ನು ಪ್ರೆರೇಪಿಸುತ್ತಿರುವ ಶಿಕ್ಷಕರ ಪ್ರಯತ್ನವನ್ನು ಶ್ಲಾಘಿಸಿದ ಅವರು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲು ಶುಭಕೋರಿದರು.
ಕಾರ್ಯಕ್ರಮದಲ್ಲಿ ಶಾರದಾಂಬಾ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಹೆಗಡೆ ಗಡಿಕೈ, ಆಡಳಿತ ಮಂಡಳಿಯ ಸದಸ್ಯರು, ಶ್ರೀ ಶಾರದಾಂಬಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಸಂತ ಹೆಗಡೆ ಇವರು ಉಪಸ್ಥಿತರಿದ್ದರು. ಬೆಂಗಳೂರಿನಿಂದ ಆಗಮಿಸಿದ ಅವರಿಗೆ ರಾತ್ರಿಯ ಊಟೋಪಚಾರದ ವ್ಯವಸ್ಥೆಯನ್ನು ಸಂಸ್ಥೆಯು ಏರ್ಪಡಿಸಲಾಯಿತು.