ಯಲ್ಲಾಪುರ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಶನಿವಾರ ರಾತ್ರಿ ಪಟ್ಟಣದ ಗಾಂಧಿ ಕುಟೀರದಲ್ಲಿ ಸಂಕಲ್ಪ ಸೇವಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಸಂಕಲ್ಪ ಉತ್ಸವವನ್ನು ಸಂಸದರಾದ ಅನಂತಕುಮಾರ ಹೆಗಡೆ ಅವರೊಂದಿಗೆ ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಕಲ್ಪ ಉತ್ಸವ ಸಾಂಸ್ಕೃತಿಕ ಕಲೆಗಳ ಅನಾವರಣದ ಮುಖ್ಯ ವೇದಿಕೆಯಾಗಿದೆ ಎಂದರು. ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ಎಸ್.ವಿ.ಸಂಕನೂರ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿ ಉಪಾಧ್ಯಕ್ಷರು, ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷರಾದ ಪ್ರಮೋದ ಹೆಗಡೆ ಹಾಗೂ ಪ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಜರಿದ್ದರು.