ಶಿರಸಿ: ಇಲ್ಲಿಯ ಚಿಪಗಿ ಬಳಿ ರಸ್ತೆಗೆ ಅಳವಡಿಸಲಾಗಿದ್ದ ಡಿವೈಡರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ.
ಯಲ್ಲಾಪುರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ಕೆಲಸ ಮಾಡುತ್ತಿದ್ದ ಮೋಹನ ಬೇತಾಳ (40) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಪೆÇಲಿಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಆಂಬುಲೆನ್ಸ್ ತಡವಾಗಿ ಬಂದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.