ಅಂಕೋಲಾ: ತಾಲೂಕಿನ ಹೊನ್ನಳ್ಳಿ ಗ್ರಾಮದ ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರ ಪರಿಸರದ ಪ್ರೀತಿ ಮಾಡಿದ ಸಾಧನೆಗೆ ವೃಕ್ಷ ಮಾತೆ ತುಳಸಿ ಗೌಡ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಪ್ರದಾನ ಮಾಡಿದರು.
ವೃಕ್ಷಮಾತೆಯಾದ ಆಕೆ ಬೆಳೆಸಿದ ಮರಗಳು ಒಂದಲ್ಲಾ, ಎರಡಲ್ಲಾ, ಲಕ್ಷಗಟ್ಟಲೇ ಗಿಡಗಳನ್ನು ತನ್ನ ಮಕ್ಕಳಂತೆ ಪ್ರೀತಿಯಿಂದ ಸಾಕಿ-ಸಲಹಿದ್ದಾಳೆ. ಸುಮಾರು ವರ್ಷಕ್ಕೆ 30 ಸಾವಿರ ಗಿಡಗಳ ನಾಟಿ ಇದರೊಂದಿಗೆ ತಾನು ಬೆಳೆಸಿದ ಸಸಿಗಳನ್ನು ಹೊನ್ನಳ್ಳಿ ಭಾಗದ ಅರಣ್ಯ ಪ್ರದೇಶದಲ್ಲಿ, ಸರ್ಕಾರಿ ಕಚೇರಿ, ಶಾಲೆ, ಮನೆಗಳ ಆವರಣ, ರಸ್ತೆಗಳ ಪಕ್ಕದಲ್ಲಿ ನೆಡಲು ಪ್ರಾರಂಭಿಸಿದ್ದರು. ವರ್ಷಕ್ಕೆ ಸುಮಾರು 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುವ ಕಾರ್ಯವನ್ನು ನಿರಂತರ ಮಾಡುತ್ತಾ ಬಂದರು. ಈಕೆ ನೆಟ್ಟು ಪೋಷಿಸಿದ ಸಸಿಗಳು ಇಂದು ಬೆಳೆದು ಹೆಮ್ಮರವಾಗಿ ಸಾವಿರಾರು ಜನರಿಗೆ ಗಾಳಿ ನೆರಳನ್ನು ಕೊಡುವ ಕೆಲಸ ಮಾಡುತ್ತಿವೆ. ಆಕೆ ನೆಟ್ಟ ಗಿಡ ನಮ್ಮ ಮುಂದಿನ ಪೀಳಿಗೆಗೂ ಸಹಾಯವಾಗಬಲ್ಲದು. ಇಂತಹ ಅಪರೂಪದ ಕಾಯಕದಲ್ಲಿ ತೊಡಗಿಸಿಕೊಂಡಿರುವ ವೃಕ್ಷಮಾತೆ ತುಳಸಿ ಗೌಡ.
ಈಕೆಯ ಪರಿಸರ ಕಾಳಜಿ ದೇಶಕ್ಕೆ ಮಾದರಿಯಾಗಿ, ಮುಂದಿನ ಪೀಳಿಗೆಗೆ ವರವಾಗಲಿ ಎಂಬುದು ಆಶಯ.