• Slide
    Slide
    Slide
    previous arrow
    next arrow
  • ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣ ವಿತರಿಸಿದ ಸ್ಪೀಕರ್ ಕಾಗೇರಿ

    300x250 AD

    ಶಿರಸಿ: ಕೃಷಿಯಲ್ಲಿ ಯಾಂತ್ರಿಕತೆ ತರುವುದಕ್ಕೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಡಿ ನೀಡುವ ಯಂತ್ರೋಪಕರಣಗಳನ್ನು ವಿಧಾಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿತರಿಸಿದರು.


    ಕೃಷಿ ಇಲಾಖೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋಮವಾರ ಮೊದಲ ಹಂತದಲ್ಲಿ 25 ಲಕ್ಷ ರೂ. ಮೌಲ್ಯದ ಯಂತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿದರು.

    300x250 AD


    ಈ ವೇಳೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೃಷಿ ಯಾಂತ್ರೀಕರಣ ಯೋಜನೆಯಡಿ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಸೌಲಭ್ಯ ನೀಡುತ್ತಿವೆ. ಇದನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

    2 ಭತ್ತ ಕಟಾವು ಯಂತ್ರ, 1 ಕಳೆ ಕೊಚ್ಚುವ ಯಂತ್ರ, 3 ವೀಡ್ ಕಟರ್ ಯಂತ್ರವನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
    ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಧುಕರ ನಾಯ್ಕ ಇದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top