ಬೆಂಗಳೂರು: ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ನಿರ್ಧರಿಸಿದೆ.
ಇಂದು ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಚಿವ ಸಂಪುಟದ ಸಭೆ ನಡೆದಿದೆ.
ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸುವ ಬಗ್ಗೆ ಬಹುದಿನಗಳಿಂದ ಚರ್ಚೆ ನಡೆಯುತ್ತಾ ಬಂದಿದೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಇದೀಗ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಈಗಾಗಲೇ ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಲಾಗಿದೆ. ಅದರಂತೆ ಮುಂಬೈ ಕರ್ನಾಟಕ ಕಿತ್ತೂರು ಕರ್ನಾಟಕವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.