ಕಾರವಾರ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಗೂ ಅಲೆಮಾರಿ/ಅರೆಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಗೆ 2021-22 ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯತಿ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ವೆಬ್ ಸೈಟ್ ನಲ್ಲಿ ಸಲ್ಲಿಸಲು ನ. 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು, ವಿದ್ಯಾರ್ಥಿ ವೇತನಕ್ಕೆ ಸಂಬoಧಿಸಿದ ಮಾಹಿತಿಯನ್ನು ವೆಬ್ ಸೈಟ್ ನಿಂದ ಪಡೆದುಕೊಳ್ಳಬಹುದಾಗಿದೆ .
ಅಥವಾ ಇಲಾಖೆಯ ಮೊಬೈಲ್ ಸಂಖ್ಯೆ 8050770005, 8050770004, ದೂರವಾಣಿ ಸಂಖ್ಯೆ: 080-35254757, 08382-226589 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ವಿರೇಂದ್ರ ಎನ್. ಬಾಡಕರ ತಿಳಿಸಿದ್ದಾರೆ.