• first
    second
    third
    previous arrow
    next arrow
  • Trending Now

    ನ.17 ರಿಂದ ಡಿಗ್ರಿ ಕಾಲೇಜು ಪ್ರಾರಂಭ; ಡಿಸಿಎಂ

    300x250 AD

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿಯ ನಡುವೆಯೂ ನ.17 ರಿಂದ ಪದವಿ ಕಾಲೇಜುಗಳನ್ನು ಪ್ರಾರಂಭ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

    ಶುಕ್ರವಾರ ರಾಜ್ಯದಲ್ಲಿ ಕಾಲೇಜು ತೆರೆಯುವ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ತಜ್ಞರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳೊಂದಿಗೆ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಗಳನ್ನು ಹೈಬ್ರಿಡ್ ಮಾದರಿಯಲ್ಲಿ ತೆರೆಯಲು ಒಪ್ಪಿಗೆ ಸೂಚಿಸಿದೆ.

    300x250 AD

    ಈ ಕುರಿತಂತೆ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ ನಾರಾಯಣ್ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಇಂದಿನ ಸಿಎಂ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೈಬ್ರಿಡ್ ಮಾದರಿಯಲ್ಲಿ ರಾಜ್ಯದಲ್ಲಿ ಡಿಗ್ರಿ ಕಾಲೇಜ್ ತೆರೆಯಲು ತೀರ್ಮಾನಿಸಲಾಗಿದೆ. ತರಗತಿಗೆ ಹಾಜರಾಗಿಯಾದರೂ ಕಲಿಯಬಹುದು. ಇಲ್ಲವೇ ಆನ್ ಲೈನ್ ತರಗತಿಯಲ್ಲಿ ಹಾಜರಾಗಿಯಾದರೂ ವಿದ್ಯಾರ್ಥಿಗಳು ಕಲಿಕೆ ಮುಂದುವರೆಸಬಹುದು ಎಂಬುದಾಗಿ ತಿಳಿಸಿದರು. ಹೀಗಾಗಿ ರಾಜ್ಯದಲ್ಲಿ ಎಲ್ ಎಂ ಎಸ್ ಆಧಾರಿತವಾಗಿ ನವೆಂಬರ್ 17ರಿಂದ ಪದವಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top