• Slide
    Slide
    Slide
    previous arrow
    next arrow
  • ನ.11ಕ್ಕೆ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ನಿರ್ಧಾರ

    300x250 AD

    ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒನಕೆ ಓಬವ್ವ ಜಯಂತಿಯನ್ನು ಆಚರಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

    ನವೆಂಬರ್ 11 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಡಿನ ವೀರ ಮಹಿಳೆ ಚಿತ್ರದುರ್ಗದ ಓಬವ್ವ ಅವರ ಜನ್ಮದಿನ ಇನ್ನು ಮುಂದೆ ಒನಕೆ ಓಬವ್ವ ಜಯಂತಿ ಎಂದು ಆಚರಣೆಗೊಳ್ಳುತ್ತಿರುವುದು ಕರುನಾಡಿನ ಜನತೆಗೆ ಸಂತಸ ತಂದಿದೆ.

    300x250 AD

    ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು, “ಒನಕೆ ಓಬವ್ವರನ್ನು ಕರ್ನಾಟಕದ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕ ಸಾಲಿನಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದ್ದು, ಇವರು 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೇಗಾರರಾಗಿದ್ದ ಮದಕರಿನಾಯಕನ ಕೋಟೆಯ ಕಾವಲುಗಾರ ಮುದ್ದು ಹನುಮಪ್ಪನ ಪತ್ನಿ. ಚಿತ್ರದುರ್ಗದ ಮೇಲೆ ಹೈದರಾಲಿಯ ಸೈನಿಕರು ಏಕಾಏಕಿ ದಾಳಿ ನಡೆಸಿದಾಗ ಒನಕೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಶತ್ರುಗಳನ್ನು ಎದುರಿಸಿದ್ದರು. ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಸಂಹಾರ ಮಾಡಿದ್ದರು. ಅಂದಿನಿಂದ ಇವರು ಒನಕೆ ಓಬವ್ವ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ಈಗಾಗಲೇ ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಒನಕೆ ಓಬವ್ವ ಕ್ರೀಡಾಂಗಣ ಎಂದು ಹೆಸರಿಸಲಾಗಿದೆ. ಇನ್ನು ಮುಂದೆ ಪ್ರತಿ ವರ್ಷ ನವೆಂಬರ್ 11ರಂದು ಒನಕೆ ಓಬವ್ವ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ” ಎಂದಿದೆ.
    ನ್ಯೂಸ್ 13

    Share This
    300x250 AD
    300x250 AD
    300x250 AD
    Leaderboard Ad
    Back to top