Slide
Slide
Slide
previous arrow
next arrow

ಭಾರತದ ಕೊರೊನಾ ಲಸಿಕಾ ಸರ್ಟಿಫಿಕೇಟ್’ಗೆ 96 ದೇಶಗಳ ಮಾನ್ಯತೆ

300x250 AD

ನವದೆಹಲಿ: ಪ್ರಸ್ತುತ 96 ದೇಶಗಳು ಭಾರತದ ಕೋವಿಡ್ ಲಸಿಕಾ ಸರ್ಟಿಫಿಕೇಟ್‍ಗೆ ಮಾನ್ಯತೆ ನೀಡಲು ಒಪ್ಪಿಕೊಂಡಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ತಿಳಿಸಿದ್ದಾರೆ.

‘ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಪರಸ್ಪರ ಅಂಗೀಕಾರಕ್ಕೆ 96 ರಾಷ್ಟ್ರಗಳು ಒಪ್ಪಿಕೊಂಡಿವೆ. ಕೋವಿಶೀಲ್ಡ್ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ರಾಷ್ಟ್ರೀಯವಾಗಿ ಅನುಮೋದಿಸಲಾದ ಕೋವಿಡ್ ಲಸಿಕೆಗಳ ಎರಡೂ ಡೋಸ್ ಪಡೆದ ಪ್ರಯಾಣಿಕರ ಭಾರತೀಯ ಲಸಿಕೆ ಪ್ರಮಾಣಪತ್ರಗಳನ್ನು ಮಾನ್ಯ ಮಾಡಲು ಇವುಗಳು ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ.

300x250 AD

ಇದು ಭಾರತದ ಲಸಿಕೆಗಳು ಮತ್ತು ಲಸಿಕಾ ಪ್ರಕ್ರಿಯೆಯು ವಿಶ್ವಾದ್ಯಂತ ಸ್ವೀಕಾರಾರ್ಹತೆ ಪಡೆದುಕೊಂಡಿದೆ ಎಂಬುದರ ಪ್ರತಿಬಿಂಬವಾಗಿದೆ ಎಂದು ಡಾ ಮಾಂಡವಿಯಾ ಹೇಳಿದ್ದಾರೆ.

ಕೇಂದ್ರ ಸರ್ಕಾರವು ಲಸಿಕೆ ನೀಡುವಿಕೆ ವೇಗವನ್ನು ಹೆಚ್ಚಿಸಲು ಮತ್ತು ಕೋವಿಡ್-19 ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಪ್ರಯತ್ನ ಮುಂದುವರೆಸಿದೆ. ಕೇಂದ್ರ ಸರ್ಕಾರದ ಬದ್ಧತೆಯ ಫಲವಾಗಿ ಅಕ್ಟೋಬರ್ 21, 2021 ರಂದು ಭಾರತ 100 ಕೋಟಿ ಲಸಿಕೆ ಡೋಸ್ ಮೈಲಿಗಲ್ಲನ್ನು ದಾಟಿದೆ ಎಂದು ಅವರು ಹೇಳಿದರು.
ನ್ಯೂಸ್ 13

Share This
300x250 AD
300x250 AD
300x250 AD
Back to top