ಶಿರಸಿ: ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್’ನ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಾಗಿದ್ದು ತಮ್ಮ ಅಮೂಲ್ಯವಾದ ಮತವನ್ನು ನೀಡಿ ಕನ್ನಡ ಸಾಹಿತ್ಯ ಸೇವೆ ಮಾಡಲು ಅವಕಾಶ ನೀಡಬೇಕು ಎಂದು ವ.ಚ ಚನ್ನೇಗೌಡ ಎಂದರು.
ಅವರು ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಯುವ ಬರಹಗಾರರಿಗೆ ಹಾಗೂ ಮಹಿಳಾ ಸಾಹಿತಿಗಳಿಗೆ ಪರಿಷತ್ತಿನ ವೇದಿಕೆಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದು ಮತ್ತು ನಿರಂತರವಾಗಿ ಅವರಬೆಳವಣಿಗೆಗೆ ಪೂರಕವಾಗುವ ತರಬೇತಿಗಳನ್ನು ನೀಡಲಾಗುವುದು. ಕನ್ನಡ ಸಾಹಿತ್ಯ ಭವನಗಳನ್ನು ತಾಲೂಕು ಹಾಗೂ ಜಿಲ್ಲೆಯಲ್ಲಿ ಸ್ಥಾಪನೆಮಾಡಲು ಉತ್ತೇಜನ ನೀಡಲಾಗುವುದು. ಕೇಂದ್ರ ಸರ್ಕಾರ ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗಗಳನ್ನು ಕನ್ನಡಿಗರು ಪಡೆಯಲು ಸೂಕ್ತ ಮಾರ್ಗದರ್ಶನ ನೀಡುತ್ತೇವೆ. ನಾಲ್ಕು ಕಂದಾಯ ವಲಯಗಳಲ್ಲಿ ಮಹಿಳಾ, ದಲಿತ ವಚನ ಹಾಗೂ ದಾಸ ಸಾಹಿತ್ಯ ಮುಂತಾದ ಎಲ್ಲ ಸಾಹಿತ್ಯ ಪ್ರಕಾರಗಳ ಸಮಾವೇಶ ನಡೆಸುತ್ತೇವೆ. ಅದರಲ್ಲೀ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತೇವೆ. ಕರ್ನಾಟಕದ ಪರಂಪರೆಯನ್ನು ಪ್ರತಿಬಿಂಬಿಸುವ ಸ್ಥಿರ ಪ್ರದರ್ಶನ ವನ್ನು ವ್ಯವಸ್ಥೆ ಮಾಡಲಾಗುವುದು.
ಯುವ ಬರಹಗಾರ ಒಂದು ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರಕಟಿಸಲಾಗುವುದು. ಆದ್ದರಿಂದ ಇದೇ 21 ರಂದು ನಡೆಯಲಿರುವ ಚುನಾವಣೆಯಲ್ಲಿ ನನಗೆ ಮತನೀಡಿ ಗೆಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಎಂಕೆ ಹೆಬ್ಬಾಳ, ಕೆ ಬಿ ಕಾನಡೆ, ಮಂಜುನಾಥ ಶೇಟ್, ಗಂಗಣ್ಣ ಉಪಸ್ಥಿತರಿದ್ದರು.