ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ಮಠದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಆಟದಲ್ಲಿ ತೊಡಗಿದ್ದ ವೇಳೆ ಪೆÇಲೀಸರು ದಾಳಿ ನಡೆಸಿ, 14 ಜನರ ಮೇಲೆ ಕೇಸು ದಾಖಲಿಸಿದ ಘಟನೆ ನಡೆದಿದೆ.
ದಾಳಿ ವೇಳೆ ಅಂದರ್-ಬಾಹರ್ ಆಟದಲ್ಲಿ ಬಳಸಿದ್ದ ನಗದು 3,500 ರೂಪಾಯಿ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 4 ಜನ ಆರೋಪಿಗಳು ದಾಳಿಯ ಕಾಲಕ್ಕೆ ಸೆರೆ ಸಿಕ್ಕಿದ್ದು, ಇನ್ನುಳಿದವರು ಪರಾರಿಯಾಗಿದ್ದಾರೆ.
ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.