ಕಾರವಾರ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನ.12 ರಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ಫೋನ್ ಇನ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಫೋನ್ ಇನ್‌ಕಾರ್ಯಕ್ರಮದಲ್ಲಿ ಪಾಲ್ಗೊಂಡು ಫೋನ್ ಕರೆಗಳಿಗೆ ಉತ್ತರಿಸಲಿದ್ದಾರೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಹಾಗೂ ಅಂತರಜಾತಿ ವಿವಾಹವಾದ ಫಲಾನುಭವಿಗಳು ನ. 12 ರಂದು ಬೆಳಿಗ್ಗೆ 10.30 ರಿಂದ 11.30 ರ ವರೆಗೆ ಸಮಾಜ ಕಲ್ಯಾಣ ಇಲಾಖೆ, ಕಾರವಾರ ಕಚೇರಿ ದೂರವಾಣಿ ಸಂಖ್ಯೆ: 08382-226514 ಅಥವಾ 9480843047 ಕ್ಕೆ ಸಂಪರ್ಕಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಲು ಕೋರಿದೆ.