ಕಾರವಾರ: ವಿಧಾನ ಸಭಾಕ್ಷೇತ್ರದ ವಿಶೇಷ ಸಂಕ್ಷಿಪ್ತ ಮತದಾರರ ಪರಿಷ್ಕರಣೆ-2022 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ನವೆಂಬರ್ ಒಂದರಂದು ನಡೆಸಿದ ಅರ್ಹತಾ ಪರಿಷ್ಕರಣೆಯ ಕರಡು ಮತದಾರರ ಪಟ್ಟಿಯ ಪ್ರಕಾರ ಕಾರವಾರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆ ಸಂಖ್ಯೆ 67 ರಿಂದ 118ರ ವರೆಗಿನ 52 ಮತಗಟ್ಟೆಗಳ ಭಾಗವಾರು ಮತದಾರರ ಪಟ್ಟಿಯನ್ನು ಕಾರವಾರ ನಗರಸಭೆಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಪೌರಾಯುಕ್ತ ಆರ್.ಪಿ. ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಡು ಮತದಾರರ ಪಟ್ಟಿ ಪ್ರಕಟ
