ಶಿರಸಿ: ತಾಲೂಕಿನಲ್ಲಿ ನ.13 ರಂದು ಕೊರೊನಾ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ ಲಸಿಕೆಯನ್ನು ಬೆಳಿಗ್ಗೆ 10ರಿಂದ 1 ಗಂಟೆಯವರೆಗೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಬನವಾಸಿ, ಪ್ರಾಥಮಿಕ ಆರೋಗ್ಯ ಕೇಂದ್ರ ಬಿಸಲಕೊಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರ ದಾಸನಕೊಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರ ಹೆಗಡೆಕಟ್ಟಾ, ಪ್ರಾಥಮಿಕ ಆರೋಗ್ಯ ಕೇಂದ್ರ ಹುಲೇಕಲ್, ಪ್ರಾಥಮಿಕ ಆರೋಗ್ಯ ಕೇಂದ್ರ ಕಕ್ಕಳ್ಳಿ, ಮೆಣಸಿ ಪ್ರಾಥಮಿಕ ಆರೋಗ್ಯ ಕೇಂದ್ರ, ರೇವಣಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಲ್ಕಣಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಲಾಗುವುದು ಎಂದು ತಿಳಿಸಿದ್ದಾರೆ.