ಶಿರಸಿ: ಜಿಲ್ಲೆಯ ಹಾಲಿ ಕಾಂಗ್ರೆಸ್ ಎಂಎಲ್ಸಿ ಎಸ್ ಎಲ್ ಘೊಟ್ನೇಕರ್ ತಾವು ಪರಿಷತ್ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎರಡು ಅವಧಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿoದ ಪರಿಷತ್ ಗೆ ಆಯ್ಕೆಯಾಗಿದ್ದೇನೆ. ತಾನು ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ, ಈ ಬಗ್ಗೆ ಹೈ ಕಮಾಂಡ್ ಗೆ ಪತ್ರ ಬರೆದು ತಿಳಿಸಿದ್ದೇನೆ.
ವಿಧಾನಸಭೆ ಚುನಾವಣೆಗೆ ನಿಲ್ಲುತ್ತೇನೆ. ಎಂಎಲ್ಸಿ ಸ್ಥಾನಕ್ಕೆ ಪಕ್ಷ ಯಾರನ್ನು ನಿಲ್ಲಿಸಿದರೂ ಅವರಿಗೆ ಬೆಂಬಲ ನೀಡುತ್ತೇನೆ ಎಂದು ಘೊಟ್ನೇಕರ್ ತಿಳಿಸಿದ್ದಾರೆ.